ವಿಜಯಪುರ : ಕಾಂಗ್ರೆಸ್ ಕಚೇರಿಯಲ್ಲಿ ರಾರಾಜಿಸಿದ ಸಾವರ್ಕರ್ ಫೋಟೋ  – Vishwanews24

Featured, ರಾಜ್ಯ ನ್ಯೂಸ್

ವಿಜಯಪುರ ಕಾಂಗ್ರೆಸ್ ಕಚೇರಿಯಲ್ಲಿ ರಾರಾಜಿಸಿದ ಸಾವರ್ಕರ್ ಫೋಟೋ 

ವಿಜಯಪುರ: ರಾಜ್ಯದಲ್ಲಿ ಸಾವರ್ಕರ್ ಪರ-ವಿರೋಧ ವಾದ ತಾರಕಕ್ಕೇರುತ್ತಿರುವ ನಡುವೆಯೇ ವಿಜಯಪುರದ ಕಾಂಗ್ರೆಸ್ ಕಚೇರಿಯಲ್ಲಿ ಸಾವರ್ಕರ್ ಫೋಟೋ ರಾರಾಜಿಸಿದೆ.

ಜಲನಗರದ ಕಚೇರಿ ಗೋಡೆಗಳ ಮೇಲೆ ಸಾವರ್ಕರ್ ಭಾವಚಿತ್ರ ಪ್ರತ್ಯಕ್ಷವಾಗಿದೆ. ರಾತ್ರೋರಾತ್ರಿ ಸಾವರ್ಕರ್ ಫೋಟೋ ಪ್ರತ್ಯಕ್ಷವಾಗಿದ್ದು, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ್ ನೇತೃತ್ವದಲ್ಲಿ ಕೃತ್ಯ ನಡೆಸಲಾಗಿದೆ ಎಂಬ ಆರೋಪವಿದೆ. ಈ ವಿವಾದ ಮತ್ತಷ್ಟು ತಾರಕಕ್ಕೇರುವ ಸಾಧ್ಯತೆಯನ್ನು ಅರಿತ ಪೊಲೀಸರು ಫೋಟೋಗಳನ್ನು ತೆರವುಗೊಳಿಸಿದ್ದಾರೆ.

ಸಾವರ್ಕರ್ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಂತೆ ರಾಜ್ಯದ ವಿವಿಧೆಡೆ ಸಾವರ್ಕರ್ ಫ್ಲೆಕ್ಸ್, ಫೋಟೋ ಹಾಕುವ ಮೂಲಕ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ. ಕೆಲದಿನಗಳ ಹಿಂದೆ ಸಿದ್ದರಾಮಯ್ಯ ಮಡಿಕೇರಿ ಪ್ರವಾಸ ಕೈಗೊಂಡಿದ್ದಾಗ ಸಾವರ್ಕರ್ ಫೋಟೋ ಪ್ರದರ್ಶಿಸಿ ಅವರ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು.

ಆಜಾನ್ ವಿರುದ್ಧ ಮತ್ತೆ ಸಮರ : ಮಸೀದಿ ಧ್ವನಿವರ್ಧಕ ವಿರುದ್ಧ ಆ. 23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಶ್ರೀರಾಮಸೇನೆ ಕರೆ – Vishwanews24

Leave a Reply