ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು
ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಆ.25ರ ಮಂಗಳವಾರ ಎಲೆಕ್ಟಿಕ್ ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ದ್ವಿಚಕ್ರ ವಾಹನ ಸವಾರ ಹರ್ಷದ್ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24
ಮೃತ ಹರ್ಷದ್ ಅವರು ಮುರ ನಿವಾಸಿಯಾಗಿದ್ದು, ರಝಾಕ್ ಸಾಹೇಬ್ ಅವರ ಪುತ್ರ. ಅವರು ನೆಹರುನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು.
