ವಿಟ್ಲ ಜಾತ್ರೆಯ ಸಂತೆಯಲ್ಲಿ ವ್ಯಾಪಾರಿ ಮೇಲೆ ಹಲ್ಲೆ : ಆರು ಮಂದಿ ಆರೋಪಿಗಳು ಬಂಧನ – Vishwanews24

Featured, ದಕ್ಷಿಣ ಕನ್ನಡ

ವಿಟ್ಲ ಜಾತ್ರೆಯ ಸಂತೆಯಲ್ಲಿ ವ್ಯಾಪಾರಿ ಮೇಲೆ ಹಲ್ಲೆ : ಆರು ಮಂದಿ ಆರೋಪಿಗಳು ಬಂಧನ

ವಿಟ್ಲ: ಜಾತ್ರೆಯ ಸಂತೆಯಲ್ಲಿ ವ್ಯಾಪಾರ ನಡೆಸುವ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್‌ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಮಂದಿ ಎಂದು ಗುರುತಿಸಲಾಗಿದೆ.

ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಪಕ್ಕದಲ್ಲಿ ಜಾತ್ರೆಯ ಸಂದರ್ಭ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್‌ ದಾಸ್‌ ಎಂಬವರಿಗೆ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ನಡೆದಿದೆ.

ಉಡುಪಿ: ಜನರು ಕಾಂಗ್ರೆಸ್ ಸರ್ಕಾರವನ್ನು ಬಯಸುತ್ತಿದ್ದಾರೆ , ಪ್ರಜಾಧ್ವನಿ ಯಾತ್ರೆ ಯಶಸ್ವಿಗೊಳಿಸಿ  : ರಮೇಶ್ ಕಾಂಚನ್  – Vishwanews24

ಸುರೇಶ್‌ ದಾಸ್‌ ಎಂಬವರು ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದರು. ರಾತ್ರಿ 12.30ಕ್ಕೆ ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ಸಮಯದಲ್ಲಿ ಗಣೇಶ್‌ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರು ಬಂದು ಅಂಗಡಿ ಏಕೆ ಬಂದ್‌ ಮಾಡುತ್ತಿಯಾ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರು ನೀಡಲಾಗಿದೆ.

ಮಂಗಳೂರು: ಬಿರುವೆರ್ ಕುಡ್ಲ ವತಿಯಿಂದ ಮೂರು ಕುಟುಂಬಗಳಿಗೆ ವೈದ್ಯಕೀಯ ವೆಚ್ಚಕ್ಕಾಗಿ 1 ಲಕ್ಷ ರೂ. ಮೌಲ್ಯದ ಚೆಕ್ ವಿತರಣೆ – Vishwanews24

Leave a Reply