ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುವ ವೇಳೆ ಹೃದಯಾಘಾತ : ರಿಕ್ಷಾ ಚಾಲಕ ಸಾವು – Vishwanews24
ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುವ ವೇಳೆ ಹೃದಯಾಘಾತ : ರಿಕ್ಷಾ ಚಾಲಕ ಸಾವು
ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ಆಟೋ ರಿಕ್ಷಾ ಚಾಲಕರೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಾಣಿ ಸಮೀಪ ಇಂದು ಬೆಳಿಗ್ಗೆ ನಡೆದಿದೆ.
ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತಪಟ್ಟವರು.
ಜಯಕರ ಪೂಜಾರಿ ಅವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಆಟೋ ರಿಕ್ಷಾ ನಿಲ್ಲಿಸಿದ್ದರು. ಈ ನಡುವೆ ಮಕ್ಕಳು ಜೆರಾಕ್ಸ್ ತೆಗೆದು ಹಿಂದಿರುಗಿದ ವೇಳೆ ಜಯಕರ ಪೂಜಾರಿ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ.
ತೊಡಿಕಾನ : ಆಕಸ್ಮಿಕವಾಗಿ ಹೊಳೆಗೆ ಬಿದ್ದು ಪಾರೆಸ್ಟ್ ವಾಚರ್ ಸಾವು – Vishwanews24
ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ ಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
