ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವುದು ದೇಶ ವಿರೋಧಿ ಚಟುವಟಿಕೆ ಅಲ್ಲ : ಮಾಧುಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುವುದು ದೇಶ ವಿರೋಧಿ ಚಟುವಟಿಕೆ ಅಲ್ಲ ಎಂದು ಹೇಳುವ ಮೂಲಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.

2012ರಲ್ಲಿ ವಿಧಾನಸಭೆಯೊಳಗೆ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಆರೋಪದ ಮೇಲೆ ಲಕ್ಷ್ಮಣ ಸವದಿ ರಾಜೀನಾಮೆ ನೀಡಿದ ಪ್ರಸಂಗ ಸಮರ್ಥಿಸಿಕೊಳ್ಳುವ ಭರದಲ್ಲಿ ಕಾನೂನು ಸಚಿವರು ಈ ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಂದು ಲಕ್ಷ್ಮಣ ಸವದಿ ಅವರು ವಿಧಾನಸಭೆಯೊಳಗೆ ಅಶ್ಲೀಲ ಚಿತ್ರ ವೀಕ್ಷಿಸಿದ್ದು ತಪ್ಪು. ಆದರೆ, ಇಂದು ಅವರನ್ನು ಉಪಮುಖ್ಯಮಂತ್ರಿ ಮಾಡಬಾರದು ಎನ್ನುವುದೇಕೆ ಎಂದು ಗೊತ್ತಾಗುತ್ತಿಲ್ಲ. ಇದು ಚರ್ಚೆಯ ವಿಷಯವೇ ಅಲ್ಲ’ ಎಂದಿದ್ದಾರೆ.

ಇತ್ತೀಚೆಗೆ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2012ರಲ್ಲಿ ವಿಧಾನಸಭೆಯೊಳಗೆ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ್ದ ವಿಷಯ ಪ್ರಸ್ತಾಪಿಸಿದ್ದರು.