ವಿಶ್ವಕಪ್ ಸೆಮಿಫೈನಲ್ : ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಮೂಲಕ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ. : ಪ್ರಧಾನಿ ಮೋದಿ -Vishwanews24
ನವದೆಹಲಿ: ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ಸ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 18 ರನ್ ಗಳ ಸೋಲು ಅನುಭವಿಸಿದ ಟೀಂ ಇಂಡಿಯಾ ಬೇಸರ ಪಡಬೇಕಿಲ್ಲ. ಸೋಲು ಹಾಗೂ ಗೆಲುವುಗಳು ಜೀವನದ ಅವಿಭಾಜ್ಯ ಅಂಗ ಎಂದು ಪಂದ್ಯದ ಬಳಿಕ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನ್ಯೂಜಿಲೆಂಡ್ ವಿರುದ್ಧ 18 ರನ್‌ಗಳ ಸೋಲುಂಡ ಭಾರತ ತಂಡ ಬೇಸರ ಪಡಬೇಕಿಲ್ಲ ಟೀಂ ಇಂಡಿಯಾ ಜಿದ್ದಾಜಿದ್ದಿನ ಹೋರಾಟ ನೀಡಿತು.. ಗೆಲುವು ಹಾಗೂ ಸೋಲುಗಳ ಜೀವನದ ಅವಿಭಾಜ್ಯ ಅಂಗ. ತಂಡದ ಮುಂದಿನ ಪ್ರಯತ್ನಕ್ಕೆ ಶುಭಾಶಯಗಳು’ …
ಇದೊಂದು ನಿರಾಶಾದಾಯಕ ಫಲಿತಾಂಶ. ಆದರೆ ಅಂತಿಮ ಕ್ಷಣದವರೆಗೂ ಟೀಮ್ ಇಂಡಿಯಾ ಉತ್ತಮ ಹೋರಾಟ ನಡೆಸಿದೆ. ಪಂದ್ಯಾವಳಿಯುದ್ದಕ್ಕೂ ಭಾರತ ಬ್ಯಾಟಿಂಗ್, ಬೌಲಿಂಗ್, ಉತ್ತಮ ಫೀಲ್ಡಿಂಗ್ ಮೂಲಕ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ.
ಸೋಲು ಮತ್ತು ಗೆಲುವು ಜೀವನದ ಒಂದು ಭಾಗವಾಗಿದೆ. ತಂಡದ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

