ವಿಷ ಪ್ರಸಾದ ಪ್ರಕರಣ – ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳು ; ಸಾವಿನ ಸಂಖ್ಯೆ 14ಕ್ಕೆ ಏರಿಕೆ
ಮೈಸೂರು: ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆ ಪ್ರಕರಣದ ಸಾವಿನ ಸಂಖ್ಯೆ ಸೋಮವಾರವೂ ಮುಂದುವರಿದಿದ್ದು, ಘಟನೆಯಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಪ್ರಸಾದ ಸೇವಿಸಿದ ಇನ್ನೂ 8 ಮಂದಿಯ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಸಾದ ಸೇವಿಸಿದ ದಿನವೇ ಪತಿ ಕೃಷ್ಣನಾಯಕ ಮೃತಪಟ್ಟರೆ, ಮೈಲಿಬಾಯಿ ಅವರನ್ನು ಜೆಎಸ್ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಬೆಳಗ್ಗೆ 8:45ಕ್ಕೆ ಮೋನಿ ಬಾಯಿ ಮೃತಪಟ್ಟಿದ್ದಾರೆ. ಮೃತರು ಕೋಟೆಪುದೆ ಗ್ರಾಮದವರು ಎಂದು ತಿಳಿದು ಬಂದಿದೆ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೈಲಿಬಾಯಿ ಕೂಡ ಮೃತಪಟ್ಟಿದ್ದಾರೆ. ಇತ್ತ ಅಪ್ಪ ಅಮ್ಮನನ್ನ ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ.

