ವೈಯಕ್ತಿಕವಾಗಿ ನನಗೆ ಸಾಕಷ್ಟು ಬೇಸರವಾಗಿದೆ. ಹೀಗಾಗಿ ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದಿದ್ದೇನೆ : ಜಿ.ಟಿ. ದೇವೇಗೌಡ -Vishwanews24
ಬೆಂಗಳೂರು: ‘ಜೆಡಿಎಸ್ ಬಂಡಾಯ ಶಾಸಕ ಎಚ್.ವಿಶ್ವನಾಥ್ ರಾಜೀನಾಮೆಯಿಂದ ತೆರವಾಗಿರುವ ಹುಣಸೂರು ವಿಧಾನಸಭೆ ಉಪಚುನಾವಣೆಯಲ್ಲಿ ನನ್ನ ಪುತ್ರ ಸ್ಪರ್ಧಿಸುತ್ತಿಲ್ಲ’ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ನಗರದ ಡಾಲರ್ಸ್ ಕಾಲೋನಿಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯ ತಿಳಿಸಿದರು.
‘ವೈಯಕ್ತಿಕವಾಗಿ ನನಗೆ ಸಾಕಷ್ಟು ಬೇಸರವಾಗಿದೆ. ಹೀಗಾಗಿ ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದಿದ್ದೇನೆ. ನಾನು ಯಾವುದೇ ಪಕ್ಷ ಸೇರಲ್ಲ. ಮುಂದಿನ ಮೂರೂವರೆ ವರ್ಷ ನಾನು ಏನೂ ಹೇಳಲ್ಲ’ ಎಂದು ಹೇಳಿದರು.
ಇನ್ನು ನಾನು ಯಾವುದೇ ಪಕ್ಷ ಸೇರಲ್ಲ. ಮುಂದಿನ ಮೂರೂವರೆ ವರ್ಷ ನಾನು ಏನೂ ಹೇಳಲ್ಲ. ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಾಗಬೇಕಿದೆ. ಈ ಬಗ್ಗೆ ಸಿಎಂ ಜತೆ ಚರ್ಚೆ ನಡೆಸಿದ್ದೇನೆ. ರಾಜಕೀಯ ವಿಷಯಗಳ ಕುರಿತು ಮಾತನಾಡಿಲ್ಲ ಎಂದು ತಿಳಿಸಿದರು.
