ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ – ತನಿಖೆಗೆ ಎಸ್‌ಐಟಿ ರಚಿಸಿ : ಸರ್ಕಾರ ಆದೇಶ – vishwanews24

Featured, ರಾಜ್ಯ ನ್ಯೂಸ್

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌: ತನಿಖೆಗೆ ಎಸ್‌ಐಟಿಗೆ –  ಸರ್ಕಾರ ಆದೇಶ

ಬೆಂಗಳೂರು :ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ. ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದರು.

ಉಡುಪಿ : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಲರಾ ; 12 ಪ್ರಕರಣ ದೃಢ – vishwanews24

ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗುರುವಾರ ಮುನಿರತ್ನ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದರು.ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು.

ಇಂದು ದೆಹಲಿ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಪ್ರಮಾಣವಚನ ಸ್ವೀಕಾರ – vishwanews24

 

Leave a Reply