ಶಿಕ್ಷಕರ ನೇಮಕಾತಿಗಾಗಿ ಮೇ.21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ; ಅಕ್ರಮ ನಡೆಯದಂತೆ ಕಠಿಣ ಕ್ರಮ : ಬಿ.ಸಿ ನಾಗೇಶ್ – Vishwanews24

Featured, ರಾಜ್ಯ ನ್ಯೂಸ್

ಶಿಕ್ಷಕರ ನೇಮಕಾತಿಗಾಗಿ ಮೇ.21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ; ಅಕ್ರಮ ನಡೆಯದಂತೆ ಕಠಿಣ ಕ್ರಮ : ಬಿ.ಸಿ ನಾಗೇಶ್ – Vishwanews24

ಬೆಂಗಳೂರು : ಮೇ.21, 22ರಂದು 15,000 ಶಿಕ್ಷಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಈ ಪರೀಕ್ಷೆಯಲ್ಲಿ ಈ ಸಂಬಂಧ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನೇತೃತ್ವದ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳೋ ನಿಟ್ಟಿನಲ್ಲಿ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ವಾಚ್ ಕಟ್ಟಿ ಅಭ್ಯರ್ಥಿಗಳು ಬರುವಂತಿಲ್ಲ. ಆಧುನಿಕ ತಂತ್ರಜ್ಞಾನದ ಯಾವುದೇ ಉಪಕರಣಗಳನ್ನು ತರೋದಕ್ಕೂ ಅವಕಾಶವಿಲ್ಲ ಎಂದರು.

ಇನ್ನು ಪೊಲೀಸ್ ಇಲಾಖೆಯಿಂದ ನೀಡಿರುವಂತ ಸಲಹೆಗಳನ್ನು ಪಾಲಿಸಲಾಗುತ್ತಿದ್ದು, ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ತಂತ್ರಜ್ಞಾನ, ಮತ್ತಿತರ ಪರಿಕರಣಗಳನ್ನು ಪರೀಕ್ಷಾ ಕೊಠಡಿಗಳ ಒಳಗೆ ತೆಗೆದುಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.

ನಾನು ಮತ್ತು ಗುಂಡ’ ಸಿನಿಮಾದಲ್ಲಿ ಹೈಲೈಟ್ ಆಗಿದ್ದ ಸಿಂಬು ಎಂಬ ನಾಯಿ ಇನ್ನಿಲ್ಲ – Vishwanews24

Leave a Reply