ಶಿರಾಡಿ ಘಾಟ್ ಭೂಕುಸಿತ – ಮಂಗಳೂರು ಬೆಂಗಳೂರು ನಡುವೆ ಹೆಚ್ಚುವರಿ ರೈಲಿಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮನವಿ – Vishwanews24

Featured, ದಕ್ಷಿಣ ಕನ್ನಡ

ಶಿರಾಡಿ ಘಾಟ್ ಭೂಕುಸಿತ – ಮಂಗಳೂರು ಬೆಂಗಳೂರು ನಡುವೆ ಹೆಚ್ಚುವರಿ ರೈಲಿಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮನವಿ

ಮಂಗಳೂರು: ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದ್ದು. ಈ ಹಿನ್ನಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದು ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಜನರಿಗೆ ಸಂಕಷ್ಟ ತಂದೊಡ್ಡಿದ್ದು, ಈ ಹಿನ್ನಲೆ ಮಂಗಳೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸಂಚಾರ ಆರಂಭಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಶ್ಣವ್ ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದಾರೆ. ‘ನನ್ನ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ’ ಎಂದು ನಳಿನ್‌ ಕುಮಾರ್‌ ಕಟೀಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು- ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಬಳಿ ಭೂಕುಸಿತ ಉಂಟಾಗಿದ್ದರಿಂದ ಜುಲೈ15ರಿಂದ ಶಿರಾಡಿ ಘಾಟಿಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಕೆಲ ಷರತ್ತಿನೊಂದಿಗೆ ಕಾರು, ಜೀಪು, ಸೇರಿದಂತೆ ಸಣ್ಣ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ : ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು : ರಾಜ್ಯ ಸರ್ಕಾರ ಆದೇಶ – Vishwanews24

Leave a Reply