ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು
ಶಿರ್ವ : ಶಂಕರಪುರದ ಸುಭಾಷ್ ನಗರದಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಕಾರಿಗೆ ಡೀಸೆಲ್ ತುಂಬಿಸಿದ ದುಷ್ಕರ್ಮಿಗಳು ಹಣ ಪಾವತಿಸದೆ ಪರಾರಿಯಾದ ಘಟನೆ ನಡೆದಿದೆ.
ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿನಲ್ಲಿ ಬಂದ ಮೂವರು ಯುವಕರು, ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಳ್ಳುವಂತೆ ಸಿಬ್ಬಂದಿಗೆ ತಿಳಿಸಿದ್ದರು. ಅದರಂತೆ 4,711 ರೂ. ಮೌಲ್ಯದ ಡಿಸೇಲ್ ಅನ್ನು ಸಿಬ್ಬಂದಿ ತುಂಬಿಸಿದರು. ಬಳಿಕ ಕಾರಿನಲ್ಲಿದ್ದವರು ಬಿಲ್ ಮಾಡುವಂತೆ ಹೇಳಿ, ಯಾವುದೇ ಹಣ ಪಾವತಿಸದೇ ಕಾರನ್ನು ಅತಿ ವೇಗದಲ್ಲಿ ಚಲಾಯಿಸಿಕೊಂಡು ಪರಾರಿಯಾದರು ಎನ್ನಲಾಗಿದೆ.
ಇದನ್ನೂ ಓದಿ:
ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24
ವಾಹನಕ್ಕೆ ಟೆಂಟ್ ಗ್ಲಾಸ್ ಅಳವಡಿಸಲಾಗಿತ್ತು. ಸಿಸಿಟಿವಿ ದೃಶ್ಯಗಳಲ್ಲಿ ಕಾರಿನ ನೋಂದಣಿ ಸಂಖ್ಯೆ ಸ್ಪಷ್ಟವಾಗಿ ಕಾಣಿಸದ ಕಾರಣ ವಾಹನದ ಗುರುತು ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ಪೆಟ್ರೋಲ್ ಬಂಕ್ ಸಿಬ್ಬಂದಿ ಶಿರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
