ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

Featured, ಉಡುಪಿ

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು

ಶಿರ್ವ : ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ವಾಹನವನ್ನು ಓವರ್ಟೇಕ್ ಮಾಡುವ ಭರದಲ್ಲಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಆ. 7 ರಂದು ರಾತ್ರಿ 7-30ಕ್ಕೆ ಶಿರ್ವ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ನಡೆದಿದೆ.

ಶಿರ್ವ ಇಂದ್ರಪುರ ನಿವಾಸಿ, ಶಿರ್ವ ದೇವಿ ವೈಂಡಿಂಗ್ ಸೆಂಟರ್’ನ ಮಾಲಕ ಪ್ರಕಾಶ್ ಆಚಾರ್ಯ(45) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ. ಪ್ರಕಾಶ್ ಆಚಾರ್ಯ ಅವರು ಪೆಟ್ರೋಲ್ ಪಂಪ್ ಎದುರುಗಡೆ ಇರುವ ಕುತ್ಯಾರು ರಸ್ತೆಯಲ್ಲಿ ತನ್ನ ಮನೆ ಕಡೆ ತೆರಳಲು ಮುಖ್ಯರಸ್ತೆ ಬದಿ ನಿಂತಿದ್ದರು.

ಈ ವೇಳೆ ಬೆಳ್ಮಣ್ ಕಡೆಯಿಂದ ವೇಗವಾಗಿ ಬಂದ ಸ್ವಿಫ್ಟ್ ಕಾರು ಬೇರೊಂದು ವಾಹನವನ್ನು ಓವರ್ ಟೇಕ್ ಮಾಡುವ ರಭಸದಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದು ಸ್ಕೂಟಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಶಿರ್ವಪೊಲೀಸರು ತನಿಖೆ ನಡೆಸುತ್ತಿದ್ದಾರೆ

Leave a Reply