ಶಿರ್ವ: ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ದಿವ್ಯಾ ವಿ. ಆಚಾರ್ಯ,ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ – Vishwanews24

Featured, ಉಡುಪಿ

ಶಿರ್ವ: ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ದಿವ್ಯಾ ವಿ. ಆಚಾರ್ಯ,ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ

ಶಿರ್ವ: ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಆ. 18 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ ಮತ್ತು ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತರಾಗಿದ್ದಾರೆ.

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿತ್ತು.

ಉಡುಪಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್‌ ಚುನಾವಣಾಧಿಕಾರಿಯಾಗಿದ್ದರು.

ಕಾಪು: ಉಚ್ಚಿಲ ಬಡಾ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಿವಕುಮಾರ್ ,ಉಪಾಧ್ಯಕ್ಷರಾಗಿ ದೀಪಕ್ ಆಯ್ಕೆ – Vishwanews24

ಗ್ರಾ.ಪಂ. ಪಿಡಿಒ ಸುಧಾಕರ ಶೆಟ್ಟಿ,ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ ನಾಯಕ್‌,ಮಾಜಿ ಗ್ರಾ.ಪಂ.ಅಧ್ಯಕ್ಷ ಸುಧಾಕರ ಪೂಜಾರಿ,ಮಾಜಿ ಉಪಾಧ್ಯಕ್ಷೆ ಸಂಧ್ಯಾ ಎಂ. ಶೆಟ್ಟಿ, ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.

Leave a Reply