ಶಿರ್ವ : ಶಾಂತಿಗುಡ್ಡೆ ಪರಿಸರದಲ್ಲಿ ತ್ಯಾಜ್ಯ ಎಸೆತ ; ಸಾಂಕ್ರಾಮಿಕ ಕಾಯಿಲೆಗಳ ಹಾವಳಿ ,ಸ್ಥಳೀಯರ ಬೇಸರ – Vishwanews24

Featured

ಶಿರ್ವ :  ಡಂಪಿಂಗ್ ಯಾರ್ಡ್ ಆಗುವತ್ತ ಶಿರ್ವದ ಶಾಂತಿಗುಡ್ಡೆ ಪರಿಸರ

ಶಾಂತಿಗುಡ್ಡೆ ಪರಿಸರದಲ್ಲಿ ತ್ಯಾಜ್ಯ ಎಸೆತ ; ಸಾಂಕ್ರಾಮಿಕ ಕಾಯಿಲೆಗಳ ಹಾವಳಿ ,ಸ್ಥಳೀಯರ ಬೇಸರ 

ಶಿರ್ವ: ಉಡುಪಿ ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛತೆಗಾಗಿ ಎಷ್ಟೇ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಿದರು ಕೂಡ ಜನರು ಸಾರ್ವಜನಿಕ ಸ್ಥಳದಲ್ಲಿ ಕಸ ಬಿಸಾಕುವುದು ಮಾತ್ರ ಕಡಿಮೆ ಆಗುತ್ತಿಲ್ಲ. ಅದೇ ರೀತಿ ಶಿರ್ವ ರಸ್ತೆಯ ಶಾಂತಿಗುಡ್ಡೆ ಪರಿಸರದಲ್ಲೂ ತ್ಯಾಜ್ಯ ಎಸೆಯುತ್ತಿದ್ದು ಈ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಶಾಂತಿಗುಡ್ಡೆ ಎಂಬಲ್ಲಿ ಸಾರ್ವಜನಿಕರು ಘನ ಮತ್ತು ದ್ರವ ತ್ಯಾಜ್ಯಗಳು ಹಾಗು ಪ್ಲಾಸ್ಟಿಕ ವಸ್ತುಗಳನ್ನು ಮನ ಬಂದ್‍ಂತೆ ರಸ್ತೆ ಬದಿಗೆ ಎಸೆಯುವುದರಿಂದ ಪರಿಸರದ ದನಕರುಗಳಿಗೆ ಮತ್ತು ಜನರಿಗೆ ತೊಂದರೆ ಉಂಟಾಗುವುದರೊಂದಿಗೆ ಸಾಂಕ್ರಾಮಿಕ ಕಾಯಿಲೆಗಳ ಹಾವಳಿ ಜೋರಾಗಿದೆ.

ಸುತ್ತ-ಮುತ್ತ ದಿನನಿತ್ಯ ಒಡಾಡುವ ನಾಗರಿಕರಿಗೆ ಕೆಟ್ಟ ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡೇ ಹೋಗ ಬೇಕಾದ ಪರಿಸ್ಥಿತಿ ಬಂದೊದಗಿದೆ. ಸುತ್ತಲ ಫಲಪತ್ತೆಯ ಭೂಮಿ ತ್ಯಾಜ ಮತ್ತು ಪ್ಲಾಸ್ಟಿಕ್ ನಿಂದ ತುಂಬಿದೆ. ಇನ್ನು ಮುಂದಾದರು ನಾಗರಿಕ ಪ್ರಪಂಚ ಇತ್ತ ಗಮನಬೇಕಾಗಿದೆ. ಇದಕ್ಕೆ ಸಂಬಂದ ಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿರ್ವ ಸಂತ ಮೇರಿ ಕಾಲೇಜಿನ ಉಪನ್ಯಾಸಕರಾದ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಒತ್ತಾಯಿಸಿದ್ದಾರೆ.

ಉಡುಪಿ: ಖಾಕಿ ಕೇಸರಿ ಮತ್ತು ತ್ರಿಶೂಲ ದೀಕ್ಷೆ ವಿವಾದ ; ಸಾಂವಿಧಾನಿಕ ನಡೆಯ ಉಲ್ಲಂಘನೆಯ ಹೊಣೆಹೊತ್ತು ಗೃಹ ಸಚಿವರು ರಾಜಿನಾಮೆ ನೀಡಬೇಕು :  ಜಿಲ್ಲಾ ಕಾಂಗ್ರೆಸ್ ಆಗ್ರಹ – Vishwanews24