ಶಿವಮೊಗ್ಗ ಡೈನಾಮೈಟ್ ಸ್ಪೋಟ : ಉನ್ನತ ಮಟ್ಟದ ತನಿಖೆಗೆ ಸಿಎಂ ಬಿಎಸ್ವೈ ಆದೇಶ ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ -Vishwanews24
ಶಿವಮೊಗ್ಗ ಡೈನಾಮೈಟ್ ಸ್ಪೋಟ : ಉನ್ನತ ಮಟ್ಟದ ತನಿಖೆಗೆ ಸಿಎಂ ಬಿಎಸ್ವೈ ಆದೇಶ -Vishwanews24
ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ. (1/2)
— B.S. Yediyurappa (@BSYBJP) January 22, 2021
ಬೆಂಗಳೂರು, ಶಿಮೊಗ್ಗದ ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಮೃತಪಟ್ಟ ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಶಿವಮೊಗ್ಗ: ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟ : 10 ಕಾರ್ಮಿಕರ ಸಾವು
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಡೈನಾಮೈಟ್ ಸ್ಪೋಟ : ಪ್ರಧಾನಿ ಮೋದಿ ಸಂತಾಪ -Vishwanews24
“ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ” ಎಂದಿದ್ದಾರೆ.
