ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ – Vishwanews24
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ – Vishwanews24
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣವಾಗಿ ಐದು ಮಂದಿ ಕೃತ್ಯ ಎಸಗಿರುವುದು ಸಾಬೀತಾಗಿದ್ದು, ಅವರಲ್ಲಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯು ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದ ಆರೋಪಿಯಾಗಿದ್ದಾನೆ. ದೊಡ್ಡಪೇಟೆ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಆರೋಪಿಯು ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದ್ದು, ಐದು ಮಂದಿ ಮಚ್ಚು ಲಾಂಗುಗಳಿಂದ ಹರ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಉಳಿದ ನಾಲ್ವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಘಟನೆಯೇನು?: ಹರ್ಷ ಎಂಬಾತ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ.
