ಶೀಘ್ರದಲ್ಲಿಯೇ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ಕ್ಯಾಂಟೀನ್ ಪ್ರಾರಂಭ : ಸಚಿವ ಬಿ ಶ್ರೀರಾಮುಲು -Vishwanews24

Featured, ರಾಜ್ಯ ನ್ಯೂಸ್

ಬಳ್ಳಾರಿ : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲವೇ ದಿನಗಳಲ್ಲಿ ಊಟದ ವ್ಯವಸ್ಥೆ ಮಾಡಲು ಕ್ಯಾಂಟೀನ್ ತೆರೆಯಲು ಚಿಂತನೆ ಮಾಡಲಾಗುತ್ತಿದೆ. ಈಗಾಗಲೇ ತಾಯಂದಿರಿಗೆ ನೀಡಲಾಗುತ್ತಿದ್ದ ಮಡಿಲು ಕಿಟ್ ಅನ್ನು, ಮತ್ತೆ ಪುನರ್ ಪ್ರಾರಂಭಿಸಿ, ನೀಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಬಿ ಶ್ರೀರಾಮುಲು,ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ನಾನು, ರಾಜ್ಯದ ಜನತೆಗೆ ಆರೋಗ್ಯ ವಿಚಾರದಲ್ಲಿ ಸೂಕ್ತ ಕ್ರಮ ವಹಿಸಲು ದುಡಿಯುತ್ತೇನೆ ಎಂದು ಹೇಳಿದರು.

ಇನ್ನೂ ಇದೇ ವೇಳೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಊಟದ ವ್ಯವಸ್ಥೆಗಾಗಿ ಕ್ಯಾಂಟೀನ್ ಪ್ರಾರಂಭಿಸುವ ಉದ್ದೇಶ ಹೊಂದಲಾಗಿದೆ.ಇದಲ್ಲದೇ ಈಗಾಗಲೇ ನೀಡಲಾಗುತ್ತಿದ್ದ ಮಡಿಲು ಕಿಟ್ ನಿಲ್ಲಿಸಲ್ಪಟ್ಟಿತ್ತು. ಇದನ್ನು ಮತ್ತೆ ನೀಡಲು ರಾಜ್ಯದ ಜನರು ಒತ್ತಾಯಿಸಿದ್ದಾರೆ. ಹೀಗಾಗಿ ಪುನರ್ ಪ್ರಾರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.