ಹುಬ್ಬಳ್ಳಿ: ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಂತ್ಯಸಂಸ್ಕಾರಕ್ಕೆ ಹೋಗುವುದಿಲ್ಲ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.
‘ಅಂತ್ಯಸಂಸ್ಕಾರದ ವೇಳೆ ಹಾಜರಾಗಬೇಕೆಂಬ ನಿಯಮ ಇಲ್ಲ. ಆಹ್ವಾನ ಬಂದರೆ ನೋಡುವೆ. ಇಲ್ಲಿದ್ದುಕೊಂಡೇ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ’ ಎಂದು ಅವರು ಹೇಳಿದರು.
ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಅಷ್ಟಮಠಾಧೀಶರ ಪೈಕಿ ಹಿರಿಯರಾಗಿದ್ದಾರೆ.
ದೂರು ದಾಖಲು: ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಂಶಯಾಸ್ಪದ ಸಾವಿಗೆ ಸಂಬಂಧಿಸಿ ತನಿಖೆ ನಡೆಸುವಂತೆ ಕೋರಿ ಶ್ರೀಗಳ ಶಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಅವರು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.