ಶೃಂಗೇರಿ ಅತ್ಯಾಚಾರ ಪ್ರಕರಣ : ಆರೋಪಿಗಳನ್ನು ಬಂಧಿಸುವಂತೆ ಕಾಂಗ್ರೆಸ್ ನಿಂದ ಪ್ರತಿಭಟನೆ -Vishwanews24

Featured, ರಾಜ್ಯ ನ್ಯೂಸ್

ಶೃಂಗೇರಿ ಅತ್ಯಾಚಾರ ಪ್ರಕರಣ : ಆರೋಪಿಗಳನ್ನು ಬಂಧಿಸುವಂತೆ ಕಾಂಗ್ರೆಸ್ ನಿಂದ ಪ್ರತಿಭಟನೆ -Vishwanews24

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ 17 ಜನರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶೃಂಗೇರಿ ಪೊಲೀಸ್ ಠಾಣೆ ಮುತ್ತಿಗೆ ಹಾಕಲು ಪ್ರತಿಭಟನಕಾರರು ಯತ್ನಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಶೃಂಗೇರಿ ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಕಾರ್ಯಕರ್ತರ ಧರಣಿ ನಡೆಸಿದರು.

ಜನರಲ್ಲಿ ಮತೀಯ ಭಾವನೆಗಳನ್ನು ಬಿತ್ತುವ ಮೂಲಕ ಅಧಿಕಾರಕ್ಕೇರಿದ ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ : ರಮಾನಾಥ ರೈ -Vishwanews24

ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತರು ಶೃಂಗೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಆರೋಪಿಗಳ ವಿರುದ್ಧ ಘೋಷಣೆ ಕೂಗಿದರು. ಬಾಲಕಿ ಮೇಲಿ ಅತ್ಯಾಚಾರಕ್ಕೆ ಬಾಲಕಿ ಚಿಕ್ಕಮ್ಮ ಸಹಕರಿಸಿದ್ದು, ಈಗಾಗಲೇ 8 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೋಲಿಸ್ ಆಧಿಕಾರಿಗಳು ತಿಳಿಸಿದ್ದಾರೆ.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಧರಣಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದರು. ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದರಲ್ಲದೆ, ಇದೇ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.