ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

Featured, ರಾಜ್ಯ ನ್ಯೂಸ್

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು

ಚಿಕ್ಕಮಗಳೂರು: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಮೂಲದ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶೃಂಗೇರಿ ಪಟ್ಟಣದ ಗಾಂಧಿ ಮೈದಾನದ ಬಳಿ ಶನಿವಾರ(ಸೆ 19)ನಡೆದಿದೆ.ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ದರ್ಶನ್ (22) ಎಂದು ಗುರುತಿಸಲಾಗಿದೆ.

ನಾಲ್ವರು ಸ್ನಾನ ಮಾಡಲು ತುಂಗಾ ನದಿಗೆ ಇಳಿದಿದ್ದರು. ಈ ವೇಳೆ ನದಿಯ ಆಳದ ಬಗ್ಗೆ ಅರಿವಿಲ್ಲದ ಕಾರಣ ದರ್ಶನ್ ನೀರಿನಲ್ಲಿ ಸಿಲುಕಿ ಮುಳುಗಿದ್ದಾರೆ. ಉಳಿದ ಮೂವರು ಸುರಕ್ಷಿತವಾಗಿ ದಡಕ್ಕೆ ವಾಪಸ್ ಬಂದಿದ್ದಾರೆ.

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶೃಂಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬಂದಿ ದರ್ಶನ್ ಅವರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.ಈ ಕುರಿತು ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply