ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭೇಟಿ – vishwanews24
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭೇಟಿ
ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ. 25ರ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಮೊದಲು ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು. ಕ್ಷೇತ್ರದ ವತಿಯಿಂದ ಮುಖ್ಯಮಂತ್ರಿಯವರನ್ನು ಡಿ.ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಭವ್ಯ ಮೆರವಣಿಗೆಯೊಂದಿಗೆ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು.
ಸಿಎಂ ಜತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಮಹದೇವಪ್ಪ, ಬೈರತಿ ಸುರೇಶ್, ಗೋವಿಂದ ರಾಜು ಸಾಥ್ ಭಾಗಿಯಾಗಿದ್ದರು.
ಸಂಜೆ ಮಂಗಳೂರು ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಭಾಗಿಯಾಗಲಿದ್ದಾರೆ
