ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸ್ಯಾಂಡಲ್ ವುಡ್ ನ ಖ್ಯಾತ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ – vishwanews24

Featured, ದಕ್ಷಿಣ ಕನ್ನಡ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸ್ಯಾಂಡಲ್ ವುಡ್ ನ ಖ್ಯಾತ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ

ಬೆಳ್ತಂಗಡಿ: ಸ್ಯಾಂಡಲ್ ವುಡ್ ನ ಖ್ಯಾತ ಮ್ಯೂಸಿಕ್  ಕಂಪೋಸರ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಅವರ ಪತ್ನಿ ಗೀತಾ ಆ.10 ರ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ನಂತರ ಶಾಂತಿವನ ಟ್ರಸ್ಟ್, ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ವತಿಯಿಂದ ಮಹೋತ್ಸವ ಸಭಾಭವನದಲ್ಲಿ ನಡೆಯಲಿರುವ ಪುಸ್ತಕಗಳ ಲೋಕಾರ್ಪಣೆ ಹಾಗೂ ರಾಜ್ಯ ಮಟ್ಟದ ಅಂಚೆ ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯ ವಾಹನಗಳ ಆರ್‌. ಸಿ. ಪ್ರತಿ ಒದಗಿಸಲು ಆ.31 ಅಂತಿಮ ದಿನ – vishwanews24

ಕ್ಷೇತ್ರದ ವತಿಯಿಂದ ಅವರನ್ನು ಗೌರವಿಸಲಾಯಿತು.ಈ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.‌ವೀರೇಂದ್ರ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಶ್ರೀ ಹಾವೇರಿ ಹುಕ್ಕೇರಿ ಮಠ ಶ್ರಿಮನ್ ನಿರಂಜನ್ ಪ್ರಣವ ಸ್ವರೂಪಿ ಸದಾಶಿವ ಮಹಾಸ್ವಾಮಿಗಳು, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತರಾಮ ತೋಳ್ಪಾಡಿತ್ತಾಯ, ಯೋಗ ಮತ್ತು ನೈತಿಕ ಶಿಕ್ಣಣ ಯೋಜನೆ ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಉಪಸ್ಥಿತರಿದ್ದರು.

ಕುಂದಾಪುರ: ಖಾಸಗಿ ಬಸ್ಸಿಗೆ  ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ – ಓರ್ವ ವಿದ್ಯಾರ್ಥಿ ಗಂಭೀರ ; ಹಲವರಿಗೆ ಗಾಯ – vishwanews24

Leave a Reply