ಸಂಗೀತ‌‌‌ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಸಂಗೀತ‌‌‌ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ಅವರು‌ ಬೋಗಾದಿಯಲ್ಲಿರುವ ವಿಲ್ಲಾದಲ್ಲಿ ತಂಗಿದ್ದರು. ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿದ್ದು ಆ ಕೂಡಲೇ‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಣಾಪಾಯದಿಂದ‌ ಅವರು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಯಾಂಡಲ್‌ವುಡ್‌ನ ಪ್ರಖ್ಯಾತ ಸಂಗೀತ ನಿರ್ದೇಶಕರಾಗಿರುವ ಅರ್ಜುನ್‌ ಜನ್ಯ, ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳ ತೀರ್ಪುಗಾರರೂ ಕೂಡಾ ಆಗಿದ್ದಾರೆಎ. ಹಾಗೆಯೇ ತಮ್ಮದೇ ಆದ ಶೈಲಿಯಲ್ಲಿ ಹಲವಾರು ಚಿತ್ರಗಳ ಹಾಡಿಗೆ ಧ್ವನಿಯಾಗಿದ್ದಾರೆ.