ಸಚಿವ ಸತೀಶ್‌ ಜಾರಕಿಹೊಳಿ ನಿವಾಸಗಳ ಮೇಲೆ ಇ.ಡಿ ದಾಳಿ – vishwanews24

Featured, ರಾಜ್ಯ ನ್ಯೂಸ್

ಅಬಕಾರಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣ 

ಸಚಿವ ಸತೀಶ್‌ ಜಾರಕಿಹೊಳಿ ನಿವಾಸಗಳ ಮೇಲೆ ಇ.ಡಿ ದಾಳಿ

ಬೆಂಗಳೂರು: ಅಬಕಾರಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳು ಸೇರಿದಂತೆ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಸಚಿವರು, ಅವರ ಆಪ್ತರು ಹಾಗೂ ಬೆಂಬಲಿಗರ ಮನೆಗಳು ಮತ್ತು ಕಚೇರಿಗಳನ್ನು ಗುರಿಯಾಗಿಸಿಕೊಂಡು ಏಕಕಾಲಕ್ಕೆ ಸುಮಾರು 14 ಕಡೆಗಳಲ್ಲಿ ಇ.ಡಿ. ಅಧಿಕಾರಿಗಳ ತಂಡಗಳು ಶೋಧ ನಡೆಸುತ್ತಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ :

ಪಿಓಪಿ ಗಣೇಶ ಮಾರಾಟ, ತಯಾರಿಕೆ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್ – vishwanews24

ಕಳೆದ ಜೂನ್ ನಲ್ಲಿ ಸತೀಶ್ ಜಾರಕಿಹೊಳಿ ಅವರ ಆಪ್ತ ಸಂಬಂಧಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಯಾಗಿದ್ದ ವೈ. ಮಂಜುನಾಥ್ ಅವರ ನಿವಾಸದ ಮೇಲೆ ED ಅಧಿಕಾರಿಗಳು ದಾಳಿ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಬಾರ್ ಲೈಸೆನ್ಸ್ ಅಕ್ರಮ ಹಾಗೂ ಹಣಕಾಸು ವ್ಯವಹಾರಗಳ ಸಂಪರ್ಕದ ಹಿನ್ನೆಲೆಯಲ್ಲಿ ಈ ಶೋಧ ನಡೆಸಲಾಗುತ್ತಿದೆ. ಮನೆಗಳಲ್ಲಿರುವ ಪ್ರಮುಖ ದಾಖಲೆಗಳು, ಆಸ್ತಿ ಪತ್ರಗಳು ಹಾಗೂ ಬ್ಯಾಂಕ್ ಖಾತೆಗಳ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ತನಿಖೆಗೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಹಾಗೂ ಇತರ ಸಾಕ್ಷ್ಯಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ :

ಪಿಓಪಿ ಗಣೇಶ ಮಾರಾಟ, ತಯಾರಿಕೆ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್ – vishwanews24

ಈ ಹಿನ್ನೆಲೆಯಲ್ಲಿ ಸಚಿವರ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

Leave a Reply