ಸತತ ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯೋಗಿ ಆದಿತ್ಯಾನಾಥ್ – Vishwanews24
ಸತತ ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯೋಗಿ ಆದಿತ್ಯಾನಾಥ್ – Vishwanews24
ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಉತ್ತರ ಪ್ರದೇಶದ ನೂತನ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ
ಲಕ್ನೋ:ಭಾರತೀಯ ಜನತಾ ಪಕ್ಷದ (BJP) ನಾಯಕ ಯೋಗಿ ಆದಿತ್ಯನಾಥ್ ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು.
ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಕೇಂದ್ರ ಸಚಿವರು ಉಪಸ್ಥಿತರಿದ್ದರು.
ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಕ್ಷದ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.
ಸುಮಾರು 85, 000 ಜನರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಉತ್ತರ ಪ್ರದೇಶದ ನೂತನ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಉತ್ತರ ಪ್ರದೇಶದ ಎಲ್ಲಾ ಮದರಸಾಗಳಲ್ಲಿ ಇನ್ನು ಮುಂದೆ ತರಗತಿಗೂ ಮುನ್ನ ರಾಷ್ಟ್ರಗೀತೆ ಹಾಡುವುದು ಕಡ್ಡಾಯ – Vishwanews24
