ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ : ದೇಶಾದ್ಯಂತ ‘ಸೇವಾ ಸಂಕಲ್ಪʼ ಅಭಿಯಾನ – vishwanews24
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ; ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ ಅ.7ರಂದು ಸತತ 25 ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದಾರೆ. ಈ ಹಿನ್ನೆಲೆ ಬಿಜೆಪಿ ಒಂದು ತಿಂಗಳ ಕಾಲ ದೇಶಾದ್ಯಂತ ಸೇವಾ ಸಂಕಲ್ಪ ಅಭಿಯಾನ ಹಮ್ಮಿಕೊಂಡಿದೆ.
2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರು, ಸುಮಾರು 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 2014ರಲ್ಲಿ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಅವರು ಕಳೆದ 12 ವರ್ಷಗಳಿಂದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪಣಂಬೂರು ಬೀಚ್ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ – vishwanews24
ಪ್ರಧಾನಿ ಮೋದಿ ಅವರ 25 ವರ್ಷಗಳು ಪೂರ್ಣಗೊಳಿಸಿದ ಹಿನ್ನೆಲೆ ಬಿಜೆಪಿ ದೇಶಾದ್ಯಂತ ವ್ಯಾಪಕ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಕೇಂದ್ರ ಸಚಿವ ಸಂಪುಟವು ಪ್ರಧಾನಿಯವರ ಜನಪರ ನಾಯಕತ್ವಕ್ಕೆ ಅಧಿಕೃತ ಅಭಿನಂದನಾ ನಿರ್ಣಯವನ್ನು ಅಂಗೀಕರಿಸಿದೆ.
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶ ಸಾಧಿಸಿದ ಐತಿಹಾಸಿಕ ಮೈಲಿಗಲ್ಲುಗಳನ್ನು ಪ್ರಶಂಸಿಸಿ ಕೇಂದ್ರ ಸಂಪುಟವು ಅಭಿನಂದನಾ ನಿರ್ಣಯ ಅಂಗೀಕರಿಸಿದೆ. ಕಳೆದ ಒಂದು ದಶಕದಲ್ಲಿ ದೇಶದ 25 ಕೋಟಿಗೂ ಹೆಚ್ಚು ಜನರನ್ನು ಬಹುಆಯಾಮದ ಬಡತನದಿಂದ ಮುಕ್ತಗೊಳಿಸಿರುವುದು ಆಡಳಿತದ ಬಹುದೊಡ್ಡ ಯಶಸ್ಸು ಎಂದು ಸಂಪುಟ ಕೊಂಡಾಡಿದೆ. ಜನ್ ಧನ್, ಆಯುಷ್ಮಾನ್ ಭಾರತ್, ಕಿಸಾನ್ ಸಮ್ಮಾನ್ ನಿಧಿ, ಉಜ್ವಲ ಹಾಗೂ ಡಿಜಿಟಲ್ ಇಂಡಿಯಾದಂತಹ ಕ್ರಾಂತಿಕಾರಿ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತು ತಲುಪುವಂತೆ ಮಾಡಿರುವುದನ್ನು ಸಂಪುಟ ನೆನಪಿಸಿಕೊಂಡಿದೆ.
ಪಣಂಬೂರು ಬೀಚ್ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ – vishwanews24
ಪ್ರಧಾನಿಯವರ 25 ವರ್ಷಗಳ ಆಡಳಿತವನ್ನು ಸ್ಮರಿಸಲು ಬಿಜೆಪಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17, 2026ರವರೆಗೆ ಒಂದು ತಿಂಗಳ ಕಾಲ ದೇಶಾದ್ಯಂತ ಸೇವಾ ಸಂಕಲ್ಪ ಅಭಿಯಾನ ಹಮ್ಮಿಕೊಂಡಿದೆ. ದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಲಕ್ಷಾಂತರ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.
