ಸರ್ಕಾರಿ ನೌಕರರ ಮುಷ್ಕರ : ರಾಜ್ಯಾಧ್ಯಂತ ಜಿಲ್ಲಾಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್, ರೋಗಿಗಳ ಪರದಾಟ – Vishwanews24
ಸರ್ಕಾರಿ ನೌಕರರ ಮುಷ್ಕರ : ರಾಜ್ಯಾಧ್ಯಂತ ಜಿಲ್ಲಾಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್, ರೋಗಿಗಳ ಪರದಾಟ
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರಕ್ಕೆ ಇಂದಿನಿಂದ ಕರೆ ನೀಡಿದ್ದಾರೆ. ಇದಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಬೆಂಬಲ ನೀಡರುವ ಕಾರಣ, ಇಂದು ರಾಜ್ಯಾಧ್ಯಂತ ಜಿಲ್ಲಾಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್ ಆದಂತೆ ಆಗಿದೆ.
ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆ, ತುಮಕೂರು ಜಿಲ್ಲಾಸ್ಪತ್ರೆ, ಮೈಸೂರಿನ ಕೆ ಆರ್ ಆಸ್ಪತ್ರೆ, ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗಳಲ್ಲಿ ಒಳರೋಗಿಗಳ ಚಿಕಿತ್ಸೆಯ ಸೇವೆಯನ್ನು ಬಂದ್ ಮಾಡಲಾಗಿದೆ. ಕೇವಲ ತುರ್ತು ಸೇವೆಯನ್ನು ಮಾತ್ರವೇ ಒದಗಿಸಲಾಗುತ್ತಿದೆ.
ಮುಕೇಶ್ ಅಂಬಾನಿ ಕುಟುಂಬ ಸದಸ್ಯರಿಗೆ ಝಡ್ ಪ್ಲಸ್ ಭದ್ರತೆ ನೀಡಲು ಸುಪ್ರೀಂ ಸೂಚನೆ – Vishwanews24
ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಪಘಾತ, ತುರ್ತು ಚಿಕಿತ್ಸೆಗೆ ಮಾತ್ರವೇ ಸೇವೆಯನ್ನು ಒದಗಿಸಲಾಗುತ್ತಿದ್ದು, ಇನ್ನುಳಿದಂತೆ ಒಪಿಡಿ ಸೇವೆಯನ್ನು ಸಂಪೂರ್ಣವಾಗಿ ಬಂದ್ ಮಾಡಿರೋ ಕಾರಣ ರೋಗಿಗಳು ಪರದಾಡುವಂತೆ ಆಗಿದೆ.
ಕೇವಲ ಜಿಲ್ಲಾಸ್ಪತ್ರೆಯಷ್ಟೇ ಅಲ್ಲದೇ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಒಪಿಡಿ ಸೇವೆಯನ್ನು ಇಂದು ಬಂದ್ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಹೀಗೆ ಆಗಿದ್ದೇ ಆದ್ರೇ ರಾಜ್ಯದಲ್ಲಿ ಆರೋಗ್ಯ ಸೇವೆಯಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತೆ ಆಗಲಿದೆ. ಸೂಕ್ತ ಕಾಲದಲ್ಲಿ ಚಿಕಿತ್ಸೆ ಸಿಗದೇ ವಯೋವೃದ್ಧರಾದಿಯಾಗಿ, ರೋಗಿಗಳು ಸಂಕಷ್ಟಕ್ಕೆ ಸಿಲುಕುವಂತೆ ಆಗಲಿದೆ.
ಎಎಪಿ ತೊರೆದು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಮಾಜಿ IPS ಅಧಿಕಾರಿ ಭಾಸ್ಕರ್ ರಾವ್ – Vishwanews24
