ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು : ಸಿದ್ದರಾಮಯ್ಯ – Vishwanews24
ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು : ಸಿದ್ದರಾಮಯ್ಯ
ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ..
ರೈತ ಹೋರಾಟಗಾರರಿಗೆ ಅಭಿನಂದನೆಗಳು..
ಬೆಂಗಳೂರು: ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದಿದ್ದಾರೆ.
ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ.
ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ, ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು ಎಂದಿದ್ದಾರೆ.
ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ,
ಜನಶಕ್ತಿಯ ಎದುರು ಆತ ಮಣಿಯಲೇಬೇಕು.ಇದುವೇ ಪ್ರಜಾಪ್ರಭುತ್ವದ ಸೊಗಸು.
ಇದುವೇ ರೈತರ ಸ್ವಾತಂತ್ರ್ಯೋತ್ಸವ. 3/5#ಜೈಕಿಸಾನ್— Siddaramaiah (@siddaramaiah) November 19, 2021
ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ. ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ ಸ್ಪೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ
ದೇಶದ ರೈತರು ತಮ್ಮ ಸತ್ಯಾಗ್ರಹದಿಂದ ದುರಹಂಕಾರವನ್ನು ಸೋಲಿಸಿದ್ದಾರೆ : ರಾಹುಲ್ ಗಾಂಧಿ – Vishwanews24
