ಸಲ್ಮಾನ್ ಖಾನ್ ಮತ್ತು ತಂದೆ ಸಲೀಂ ಖಾನ್ ಗೆ ಜೀವ ಬೆದರಿಕೆ ; ಹೆಚ್ಚಿದ ಭದ್ರತೆ- Vishwanews24
ಸಲ್ಮಾನ್ ಖಾನ್ ಮತ್ತು ತಂದೆ ಸಲೀಂ ಖಾನ್ ಗೆ ಜೀವ ಬೆದರಿಕೆ ; ಹೆಚ್ಚಿದ ಭದ್ರತೆ- VIshwanews24
ಮುಂಬೈ: ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ, ಚಿತ್ರಕಥೆಗಾರ ಸಲೀಂ ಖಾನ್ ಅವರಿಗೂ ಅನಾಮಧೇಯ ಜೀವ ಬೆದರಿಕೆ ಪತ್ರ ಬಂದ ಒಂದು ದಿನದ ನಂತರ ಮಹಾರಾಷ್ಟ್ರ ಗೃಹ ಇಲಾಖೆಯು ಅವರ ಭದ್ರತೆಯನ್ನು ಹೆಚ್ಚಿಸಿದೆ.
‘ಮಹಾರಾಷ್ಟ್ರ ಗೃಹ ಇಲಾಖೆಯು ನಟ ಸಲ್ಮಾನ್ ಖಾನ್ ಅವರಿಗೆ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ನಿನ್ನೆ ಜೂನ್ 5ರಂದು ಬೆದರಿಕೆ ಪತ್ರವನ್ನು ಕಳುಹಿಸಿದ ನಂತರ ಅವರ ಭದ್ರತೆಯನ್ನು ಬಲಪಡಿಸಿದೆ’ ಎಂದು ಸುದ್ದಿ ಸಂಸ್ಥೆ ANI ಟ್ವೀಟ್ ಮಾಡಿದೆ. ಅನಾಮಧೇಯ ಪತ್ರ ಬೆಳಕಿಗೆ ಬಂದ ನಂತರ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಸಲ್ಮಾನ್ ಖಾನ್ ಪ್ರತಿದಿನ ವಾಕಿಂಗ್ ಹೋಗುತ್ತಾರೆ. ಈ ನಡುವೆ ಅವರು ವಿಶ್ರಾಂತಿ ಪಡೆಯುತ್ತಿರುವ ಸ್ಥಳದಲ್ಲಿ ಸಲ್ಲು ತಂದೆ ಈ ಪತ್ರವನ್ನು ಸ್ವೀಕರಿಸಿದ್ದಾರೆ. ಈ ನಡುವೆ ಸಲ್ಮಾನ್ ಗೆ ಮತ್ತೆ ಬೆದರಿಕೆ ಪತ್ರ ಬಂದಿದ್ದು ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿತ್ತು. ಈ ಸಂಬಂಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಂಜಾಬ್ ಗಾಯಕ ಸಿಧು ಮುಸೇವಾಲಾ ಸಾವಿನ ಬೆನ್ನಲ್ಲೇ, ಇದೀಗ ಬಾಲಿವುಡ್ನ ಸಲ್ಮಾನ್ ಖಾನ್ ಹಾಗೂ ಸಲೀಂ ಖಾನ್ ಗೆ ಜೀವ ಬೆದರಿಕೆ ಪತ್ರವೊಂದು ಬಂದಿದ್ದು ಸದ್ಯ ತನಿಖೆ ಕೈಗೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬ್ಯಾಂಡ್ ಸ್ಟ್ಯಾಂಡ್ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದ್ದು, ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
