ಸಹಕಾರ ರತ್ನ ಡಾ.ರಾಜೇಂದ್ರ ಕುಮಾರ್ 72ನೇ ಹುಟ್ಟುಹಬ್ಬ ; ಪೇಜಾವರ ಶ್ರೀಗಳಿಗೆ ನಾಳೆ ಗುರುವಂದನೆ -Vishwanews24
ಸಹಕಾರ ರತ್ನ ಡಾ.ರಾಜೇಂದ್ರ ಕುಮಾರ್ 72ನೇ ಹುಟ್ಟುಹಬ್ಬ ; ಪೇಜಾವರ ಶ್ರೀಗಳಿಗೆ ನಾಳೆ ಗುರುವಂದನೆ
ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗೆ ಗುರುವಂದನೆ, ಆಯೋಧ್ಯೆ ಶ್ರೀ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ ಮತ್ತು ಸಹಕಾರ ರತ್ನ Dr. M N ರಾಜೇಂದ್ರ ಕುಮಾರ್ ಅವರ 72ನೆ ಹುಟ್ಟು – ಹಬ್ಬ ಪ್ರಯುಕ್ತ ಅಭಿವಂದನಾ ಕಾರ್ಯಕ್ರಮವನ್ನು ಫೆ.24ರಂದು – ಬೆಳಗ್ಗೆ 10ಕ್ಕೆ ನಗರದ ಟಿ.ವಿ. ರಮಣ ಪೈ ಕನ್ವೆನ್ಸನ್ ಹಾಲ್ನಲ್ಲಿ ಆಯೋಜಿಸಲಾಗಿದೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ರಾಜ್ಯದ ಏಕೈಕ ಸದಸ್ಯರಾಗಿರುವ ಪೇಜಾವರ ಶ್ರೀಗಳನ್ನು ಗೌರವಿಸಲಾಗುವುದು ಎಂದು ಗುರುವಂದನಾ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಉಡುಪಿ : ಉದ್ಯೋಗಕ್ಕೆ ತಕ್ಕಂತಹ ಕೌಶಲ್ಯ ಅಗತ್ಯ : ಡಾ. ಅಪ್ಪಾಜಿಗೌಡ -Vishwanews24
ರಾಮ ಮಂದಿರ ನಿರ್ಮಾಣಕ್ಕಾಗಿ ರಾಜೇಂದ್ರ ಕುಮಾರ್ ವೈಯಕ್ತಿಕ ನೆಲೆಯಿಂದ 5 ಲಕ್ಷ ರೂ., ನವೋದಯ ಟ್ರಸ್ಟ್ ನಿಂದ 5 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ. ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಸಹಕಾರ ಸಂಘ, ಸಂಸ್ಥೆಗಳು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಹೆಸರಿಗೆ ಚೆಕ್ ಅಥವಾ ಡಿಡಿ ರೂಪದಲ್ಲಿ ನೀಡುವಂತೆ ವಿನಂತಿಸಿದ್ದು, ಒಟ್ಟು ಒಂದು ಕೋಟಿ ರೂ.ಗೂ ಅಧಿಕ ಮೊತ್ತದ ನಿಧಿ ಸಮರ್ಪಣೆ ಮಾಡಲಾಗುವುದು ಎಂದರು.
ಅಂದು ಬೆಳಗ್ಗೆ ಎಸ್ಸಿಡಿಸಿಸಿ ಬ್ಯಾಂಕ್ನ ಪ್ರಧಾನ ಕಚೇರಿ ಯಿಂದ ಹೊರಡುವ ಮೆರವಣಿಗೆಯನ್ನು ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಉದ್ಘಾಟಿಸಲಿದ್ದು ಸ್ವಾಮೀಜಿ ಹಾಗೂ ಗಣ್ಯರನ್ನು ಪೂರ್ಣಕುಂಭ ಸ್ವಾಗತದ ಮೂಲಕ ಕಾರ್ಯಕ್ರಮದ ವೇದಿಕೆಗೆ ಕರೆತರಲಾಗುವುದು.
ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮ ಉದ್ಘಾ ಟಿಸಲಿದ್ದಾರೆ. ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರು ವಂದನೆ ಹಾಗೂ ನಿಧಿ ಸಮರ್ಪಣೆ ಸ್ವೀಕರಿಸಿ ಆಶೀರ್ವಚನ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ಮುರುಗೇಶ್
ನಿರಾಣಿ ನವೋದಯ ಪ್ರೇರಕರಿಗೆ ಸಮವಸ್ತ್ರ ವಿತರಿಸಲಿದ್ದು, ಸಚಿವ ಅಂಗಾರ ಚೈತನ್ಯ ಆರೋಗ್ಯ ಪರಿಹಾರ ಧನ ವಿತರಿಸಲಿದ್ದಾರೆ ಎಂದು ಹೇಳಿದರು.
ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಕುರಿತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಅಭಿವಂದನಾ ಭಾಷಣ ಮಾಡಲಿದ್ದಾರೆ. ಶಾಸಕ ವೇದವ್ಯಾಸ ಡಿ.ಕಾಮತ್, ಕ್ಯಾಂಪ್ರೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಡಿ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಕೊಡವೂರು, ದ.ಕ. ಮತ್ತು ಉಡುಪಿ ಮೀನು ಮಾರಾಟ ಮಹಾಮಂಡಲದ ಅಧ್ಯಕ್ಷ ಯಶ್ಪಾಲ್ ಸುವರ್ಣ ಭಾಗವಹಿಸಲಿದ್ದಾರೆ
” ಎಂದರು.
ಎಸ್ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಗುರುವಂದನಾ ಸಮಿತಿ ಕಾರ್ಯಾಧ್ಯಕ್ಷ ಶಶಿಕುಮಾರ್ ರೈ ಬಾಳ್ಕೊಟ್ಟು ಬ್ಯಾಂಕ್ ಕೆ ನಿರ್ದೇಶಕರಾದ ವಾದಿರಾಜ್ ಶೆಟ್ಟಿ ರಾಜೇಶ್ ರಾವ್, ಸದಾಶಿವ ಉಳ್ಳಾಲ್, ವ್ಯವಸ್ಥಾಪಕ ನಿರ್ದೇಶಕ ರವೀಂದ್ರ, ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು .
