ಸಾರಿಗೆ ನಿಗಮಗಳಿಗೆ 1,100 ಕೋಟಿ ರೂ. ಬಾಕಿ ; ಬಸ್ ಪ್ರಯಾಣ ದರ ಏರಿಸುವ ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ – vishwanews24

Featured, ರಾಜ್ಯ ನ್ಯೂಸ್

ಸಾರಿಗೆ ನಿಗಮಗಳಿಗೆ 1,100 ಕೋಟಿ ರೂ. ಬಾಕಿ ; ಬಸ್ ಪ್ರಯಾಣ ದರ ಏರಿಸುವ ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ತೈಲ ಬೆಲೆ ಹೆಚ್ಚಳ ಬೆನ್ನಲ್ಲೇ ಶೀಘ್ರವೇ ಬಸ್ ಪ್ರಯಾಣ  ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ.

2014ರಿಂದ ಬಿಎಂಟಿಸಿ ನಾಲ್ಕು ವರ್ಷದಿಂದ ಕೆಎಸ್‌ಆರ್‌ಟಿಸಿ ಪ್ರಯಾಣ ದರ ಹೆಚ್ಚಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್ : ದರ್ಶನ್ ಗ್ಯಾಂಗ್​ನ ಪೊಲೀಸ್‌ ಕಸ್ಟಡಿ ಅವಧಿ ಇಂದು ಮುಕ್ತಾಯ – ನ್ಯಾಯಾಲಯಕ್ಕೆ ಹಾಜರುಪಡಿಸಲಿರೋ ಪೊಲೀಸರು – vishwanews24

ಶಕ್ತಿ ಗ್ಯಾರಂಟಿ ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸೆಪ್ಟೆಂಬರ್ 15 ವರಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್‌ಲೈನ್‌ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ. ಶೀಘ್ರದಲ್ಲೇ ಹೆಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಎಂದರು.

ರೇಣುಕಾ ಸ್ವಾಮಿ ಕೊಲೆ ಕೇಸ್ : ದರ್ಶನ್ ಗ್ಯಾಂಗ್​ನ ಪೊಲೀಸ್‌ ಕಸ್ಟಡಿ ಅವಧಿ ಇಂದು ಮುಕ್ತಾಯ – ನ್ಯಾಯಾಲಯಕ್ಕೆ ಹಾಜರುಪಡಿಸಲಿರೋ ಪೊಲೀಸರು – vishwanews24

Leave a Reply