ಸಾರ್ವಜನಿಕರಿಗೆ ತೊಂದರೆಯಾಗುವ ಜೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ : CM ಸಿದ್ಧರಾಮಯ್ಯ – Vishwanews24
ಸಾರ್ವಜನಿಕರಿಗೆ ತೊಂದರೆ’ಯಾಗುವ ಜೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ : CM ಸಿದ್ಧರಾಮಯ್ಯ
ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಸಿಎಂ ಆಗಿದ್ದಂತ ಬಸವರಾಜ ಬೊಮ್ಮಾಯಿ ಅವರು ಜಿರೋ ಟ್ರಾಫಿಕ್ ಸಂಚಾರ ಸೌಲಭ್ಯವನ್ನು ಹಿಂಪಡೆದಿದ್ದರು. ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿರುವಂತ ಸಿದ್ಧರಾಮಯ್ಯ ಕೂಡ ಈ ನಿರ್ಧಾರವನ್ನೇ ಕೈಗೊಂಡಿದ್ದಾರೆ.
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. @siddaramaiah pic.twitter.com/8ySLySnLzz
— CM of Karnataka (@CMofKarnataka) May 21, 2023
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನುಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.
