ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ ಇಲ್ಲದೆ ಸುಲಭ ರೀತಿಯಲ್ಲಿ ಮರಳು ಪೂರೈಕೆ : ಕೋಟಾ ಶ್ರೀನಿವಾಸ ಪೂಜಾರಿ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ ಇಲ್ಲದೆ ಸುಲಭ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಸರ್ಕಾರದಿಂದ ನೀಡಬೇಕಾದ ಸೌಲಭ್ಯ ಒದಗಿಸಿ, ಸರ್ಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ತಿಗೊಳಿಸುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಲ್ಲಿ 4.62 ಕೋಟಿ ರೂ. ಮೊತ್ತ ಲಭ್ಯವಿದ್ದು, ಇದನ್ನು ಗಣಿಗಾರಿಕೆಯಿಂದ ತೊಂದರೆಗೀಡಾದ ಪ್ರದೇಶಗಳ ಅಭಿವೃದ್ಧಿಗೆ ಬಳಸಲಾಗುವುದು. ಆಯಾ ಪ್ರದೇಶದ ಶಾಸಕರಿಂದ ಕ್ರಿಯಾ ಯೋಜನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.