ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ : ಯದುವೀರ್‌ ಒಡೆಯರ್‌ ಬೇಸರ -vishwanews24

Featured, ರಾಜ್ಯ ನ್ಯೂಸ್

ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ : ಯದುವೀರ್‌ ಒಡೆಯರ್‌  ಬೇಸರ 

ಮಡಿಕೇರಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ನಡ್ವೆ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌  ಬೇಸರ ವ್ಯಕ್ತಪಡಿಸಿದ್ದಾರೆ.

ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್‌ನ ಆತಂರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್‌ ನಾಯಕರೇ  ಹೇಳಿದ್ದಾರೆಂದು ತಿಳಿಸಿದ್ದಾರೆ.

ಡಿ. 4 ಮತ್ತು 5ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ – vishwanews24

ರಾಜ್ಯದ ಜನ ಅವರನ್ನ ಆಡಳಿತ ಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಜನರ ಪರವಾಗಿ ಆಡಳಿತ ನಡೆಸುವುದು ಅವರ ಆದ್ಯ ಕರ್ತವ್ಯವಾಗಿದೆ. ಅವರ ಪಕ್ಷದಲ್ಲಿ ಆಂತರಿಕವಾಗಿ ಏನು ನಡೆಯುತ್ತಿದೆಯೋ ಅದು ನಡೆಯಲ್ಲಿ, ಆದ್ರೆ ರಾಜ್ಯದ ಆಡಳಿತ ಜನರ ಹಿತಕ್ಕಾಗಿ ಕೆಲಸ ಮಾಡುವುದು ಮೊದಲ ಕರ್ತವ್ಯ ಅದನ್ನ ಮಾಡಲಿ ಎಂದು ಹೇಳಿದ್ದಾರೆ.

 

Leave a Reply