ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರು ಪೋಲಿಸರ ವಶಕ್ಕೆ – VIshwanews24
ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರು ಪೋಲಿಸರ ವಶಕ್ಕೆ
ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಬೆಂಗಳೂರು, ದಾವಣಗೆರೆ ಹಾಗೂ ಚನ್ನಗಿರಿಯಲ್ಲಿ ಸಾಕಷ್ಟು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ನಡುವೆ ಇಂದು ಕಾಂಗ್ರೆಸ್ ನಾಯಕರುಗಳು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ನಾಯಕರುಗಳು ಕೈ ನಲ್ಲಿ ಗುಟ್ಕಾ ಬ್ಯಾಗ್ ಹಾಗೂ ಸೂಟ್ಕೇಸ್ ಅನ್ನು ಹಿಡಿದುಕೊಂಡು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು. ಇದೇ ವೇಳೆ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ನಾಯಕ ರಣದೀಪ್ ಸುರ್ಜಿತ್ವಾಲ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರುಗಳು ಸೇರಿದಂತೆ ಸಾವಿವಾರು ಕಾರ್ಯಕರ್ತರು ಬೃಹತ್ ಪ್ರತಿಭಟನೆಯನ್ನು ನಡೆಸಿ, ಸಿಎಂ ಮನೆಯತ್ತ ಮುತ್ತಿಗೆ ನಡೆಸಿದರು. ಇದೇ ವೇಳೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರಸ್ ನಾಯಕರುಗಳನ್ನು ಪೋಲಿಸರು ತಮ್ಮ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋದ ಸನ್ನಿವೇಶ ಕಂಡು ಬಂದಿತ್ತು.
ಮಂಗಳೂರು: ಕರಾವಳಿಗೆ ಬಿಸಿ ಗಾಳಿಯ ಆತಂಕ – ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – Vishwanews24
