ಸಿಎಎ ಜಾಗೃತಿ ಕಾರ್ಯಕ್ರಮದ ವೇಳೆ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ನಡೆದಿತ್ತು ಸ್ಕೆಚ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆದಿದ್ದವು. ಆದರೆ, ಸಿಎಎಯಿಂದ ದೇಶದ ಅಲ್ಪಸಂಖ್ಯಾತರಿಗೆ ಯಾವುದೆ ತೊಂದರೆ ಆಗದು ಎನ್ನುವ ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿತ್ತು. ಈ ವೇಳೆ ಸಂಸದ ತೇಜಸ್ವಿ ಸೂರ್ಯ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸ್ಕೆಚ್ ನಡೆದಿತ್ತು ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಡಿ. 22ರಂದು ಟೌನ್​ಹಾಲ್ ಬಳಿ ಸಿಎಎ ಜಾಗೃತಿ ಜಾಥಾ ನಡೆದಿತ್ತು. ಇದರಲ್ಲಿ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಸೇರಿ ಅನೇಕ ಪ್ರಮುಖರು ಪಾಲ್ಗೊಂಡಿದ್ದರು. ಸಿಎಎ ಜಾಥಾ ಮುಗಿಸಿ ತೆರಳುವಾಗ ಆರ್​ಎಸ್​ಎಸ್​ ಕಾರ್ಯಕರ್ತ ವರುಣ್ ಮೇಲೆ ಜೆ.ಸಿ ನಗರದ ರಸ್ತೆಯಲ್ಲಿ 6 ಜನ ಎಸ್​ಡಿಪಿಐ ಕಾರ್ಯಕರ್ತರಿಂದ ಕೊಲೆಗೆ ಯತ್ನ ನಡೆದಿತ್ತು.

2 ಬೈಕ್​ಗಳಲ್ಲಿ ಬಂದಿದ್ದ ಆರೋಪಿಗಳು ವರುಣ್ ಮೇಲೆ ರಾಡ್ ಹಾಗೂ ಲಾಂಗ್​ಗಳಿಂದ ಹಲ್ಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಸಾಧಿಕ್, ಅಕ್ಬರ್ ಸೇರಿ ಆರು ಜನರನ್ನು ಪೊಲೀಸರು ಬಂಧನ ಮಾಡಿದ್ದರು.

ಈ ಆರೋಪಿಗಳ ವಿಚಾರಣೆಯಲ್ಲಿ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ. ವರುಣ್‌ ಅನ್ನು ಹತ್ಯೆ ಮಾಡುವ ಸಂಚು ಇರಲಿಲ್ಲ ​ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯನ್ನು ಹತ್ಯೆ ಮಾಡುವುದು ನಮ್ಮ ಮುಖ್ಯ ಉದ್ದೇಶ ಆಗಿತ್ತು ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಬೆಂಗಳೂರಿನ ಪೋಲಿಸ್ ಆಯುಕ್ತ ಭಾಸ್ಕರ್ ರಾವ್ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292