ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ನಾಳೆ ತುಮಕೂರಿಗೆ ಆಗಮನ ಸಾಧ್ಯತೆ.. – Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ತುಮಕೂರು,: ನಡೆದಾಡುವ ದೇವರೆಂದೇ ಖ್ಯಾತರಾದ ಡಾ| ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಮಂಗಳವಾರ ತುಮಕೂರಿಗೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಗಳ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಡಾ. ಶ್ರೀ ಶಿವಕುಮಾರಸ್ವಾಮೀಜಿಗಳು ಬಡವರು, ದೀನ ದಲಿತರು ಮತ್ತು ದುರ್ಬಲ ವರ್ಗಗಳ ಶಿಕ್ಷಣ ಮತ್ತು ಆರೋಗ್ಯ ಆರೈಕೆಗೆ ಮುಂಚೂಣಿಯಲ್ಲಿದ್ದ ಮಹಾ ಸಂತರು ಎಂದು ಗುಣಗಾನ ಮಾಡಿದ್ದಾರೆ

ಈ ನಡುವೆ ಪ್ರಧಾನಿ ಮೋದಿ ಅವರ ಮಂಗಳವಾರದ ಎಲ್ಲಾ ನಿಗದಿಯಾದ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದು, ಮಠಕ್ಕೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.