ಸಿದ್ದಗಂಗಾ ಶ್ರೀಗಳ ಹುಟ್ಟೂರಾದ ವೀರಾಪುರ ಗ್ರಾಮವನ್ನು ದತ್ತು ಪಡೆಯುತ್ತೇವೆ : ಡಿ.ಕೆ. ಶಿವಕುಮಾರ್ – Vishwanews24
ರಾಮನಗರ: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು ವೀರಾಪುರ ಗ್ರಾಮವನ್ನು ದತ್ತು ಪಡೆಯುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಶಿವಕುಮಾರ ಸ್ವಾಮೀಜಿಗಳ ಹುಟ್ಟೂರಾದ ವೀರಾಪುರವನ್ನ ದತ್ತು ಪಡೆಯುತ್ತೇವೆ. ಬಾಲಗಂಗಾಧರನಾಥ್ ಸ್ವಾಮೀಜಿ ಬಾಣಂದೂರು ಹಾಗೂ ವೀರಾಪುರ ಈ ಎರಡು ಗ್ರಾಮಗಳು ಮಹಾಪುರುಷರು ಜನ್ಮತಾಳಿದ ಗ್ರಾಮಗಳಾಗಿದೆ. ಈ ಎರಡೂ ಗ್ರಾಮಗಳ ಸಮಗ್ರ ಅಭಿವೃದ್ಧಿ ಮಾಡಲು ಚಿಂತನೆ ಮಾಡಲಾಗಿದೆ. ಈ ಹಿಂದೆ ಆ ಗ್ರಾಮದಲ್ಲಿ ಸಣ್ಣ ಪುಟ್ಟ ಅಭಿವೃದ್ಧಿಯಾಗಿತ್ತು. ನಮ್ಮ ರಾಜ್ಯಕ್ಕೆ ಎರಡು ಕಣ್ಣುಗಳಿದ್ದಂತೆ. ಹೀಗಾಗಿ ಮತ್ತೆ ಅದರ ಅಭಿವೃದ್ಧಿ ಮಾಡಲು ತೀರ್ಮಾನ ಮಾಡಿರುವುದಾಗಿ ತಿಳಿಸಿದರು.
ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವ ವಿಚಾರದ ಕುರಿತು ವಿಧಾನಸಭೆಯಲ್ಲಿ ನಿರ್ಣಯ ಮಾಡುತ್ತವೆ. ಈ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಘೋಷಣೆ ಮಾಡಿದ್ದಾರೆ. ಸಂಸದರು ಕೂಡ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಭಾರತ ರತ್ನ ನೀಡಬೇಕು, ಅವರ ಮೇಲೆ ಒತ್ತಡ ತರಲಾಗುವುದು ಎಂದರು.
