Featured

ಸಿದ್ದೇಶ್ವರ ಶ್ರೀ ಲಿಂಗೈಕ್ಯ : ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನವನ್ನೂ ಕೇಳುತ್ತಿದ್ದೆವು : ಮುಸ್ಲಿಂ ಭಕ್ತರು – VIshwanews24

ಸಿದ್ದೇಶ್ವರ ಶ್ರೀ ಲಿಂಗೈಕ್ಯ : ಶ್ರೀಗಳ ಚಿಂತನೆ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ

ವಿಜಯಪುರ: ನಾವು ನಮ್ಮ ಮನೆಯಲ್ಲಿ ಕುರಾನ್ ಜೊತೆಗೆ ಶ್ರೀಗಳ ಆಶೀರ್ವಚನವನ್ನೂ ಕೇಳುತ್ತಿದ್ದೆವು. ಶ್ರೀಗಳ ಚಿಂತನೆ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ ಎಂದು ಸಿದ್ದೇಶ್ವರ ಸ್ವಾಮೀಜಿಯವರ  ಮುಸ್ಲಿಂ ಭಕ್ತರು ಭಾವನಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

ಸೋಮವಾರ ಸಂಜೆ 6 ಗಂಟೆ ವೇಳೆಗೆ ನಡೆದಾಡುವ ದೇವರು ಸಿದ್ದೇಶ್ವರ ಮಹಾಸ್ವಾಮಿ ಲಿಂಗೈಕ್ಯರಾಗಿರುವ ಹಿನ್ನೆಲೆ ಅವರ ಅಂತಿಮ ದರ್ಶನಕ್ಕಾಗಿ ಸಾವಿರಾರು ಭಕ್ತರ ದಂಡು ವಿಜಯಪುರಕ್ಕೆ ಆಗಮಿಸಿದೆ. ಇದೇ ವೇಳೆ ಅವರ ಅಂತಿಮ ದರ್ಶನಕ್ಕೆಂದು ಬಂದಿದ್ದ ಮುಸ್ಲಿಂ ಭಕ್ತರು ತಮಗಿದ್ದ ಅವರ ಮೇಲಿನ ಭಕ್ತಿ ಬಗ್ಗೆ ಗದ್ಗದಿತರಾಗಿ ಮಾತನಾಡಿದ್ದಾರೆ.

“ನಾವು ಶ್ರೀಗಳು ಬದುಕಿದ್ದಾಗ ಅವರ ಮಠಕ್ಕೆ ಹೋಗಿ ಅವರ ಪ್ರವಚನ ಕೇಳಬೇಕೆಂದು ಬಹಳ ಬಾರಿ ಅಂದುಕೊಂಡಿದ್ದೆವು. ಆದರೆ ನಾವು ಇಂದು ಅವರು ನಮ್ಮೊಂದಿಗೆ ಇಲ್ಲದಿರುವಾಗ ಭೇಟಿಯಾಗುತ್ತೇವೆ ಎಂದುಕೊಂಡಿರಲಿಲ್ಲ. ಅವರ ಬಗೆಗಿನ ಒಂದು ನಿಜ ವಿಚಾರ ಏನೆಂದರೆ, ಅವರಿಗೆ ಮರಣ ಇಲ್ಲ ಎಂದು ಭಾವನಾತ್ಮಕವಾಗಿ ತಮ್ಮ ನೋವನ್ನು ತೋಡಿಕೊಂಡರು.

ಕಳೆದ 5 ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಸೋಮವಾರ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‌ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಎಂದು ಸ್ವಾಮೀಜಿ ಹೇಳಿದ್ದರು ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಂಜೆ 6:05ಕ್ಕೆ ಅವರು ಲಿಂಗೈಕ್ಯರಾಗಿದ್ದಾರೆ.

ಅವರ ಅಂತಿಮ ದರ್ಶನಕ್ಕಾಗಿ ನಗರದ ಸೈನಿಕ ಶಾಲೆ ಮೈದಾನದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಧರ್ಮದ ಎಲ್ಲೆಯನ್ನು ಮೀರಿ ಶ್ರೀಗಳ ದರ್ಶನ ಪಡೆಯಲು ಸಾವಿರಾರು ಜನರು ಹರಿದು ಬಂದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago