ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ
ಮಂಗಳೂರು: ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24
ಈ ಕುರಿತು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರು “ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಪ್ರದೇಶವೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಆರು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಈ ಸಂಬಂಧ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ವರದಿ ಕಳುಹಿಸಲಾಗುತ್ತಿದೆ. ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲು ಎಫ್‌ಆರ್‌ಆರ್‌ಒ ಆದೇಶ ಹೊರಡಿಸಲಿದೆ ಹಾಗೂ ಸ್ವದೇಶಕ್ಕೆ ಗಡಿಪಾರು ಮಾಡಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಅಕ್ರಮ ವಲಸಿಗರ ಪತ್ತೆಗಾಗಿ ಕರಾವಳಿ ಭಾಗದಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದಾರೆ. ಈ ಕಾರ್ಯಾಚರಣೆ ಮೂಲಕ ಸುರತ್ಕಲ್‌ನಲ್ಲಿ ದಾಖಲೆಗಳಿಲ್ಲದೇ ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆಗಳ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. ಸದ್ಯ ಬಂಧಿತರನ್ನು ತನಿಖೆಗೆ ಒಳಪಡಿಸಲಾಗುತ್ತಿದ್ದು, ಎಫ್‌ಆರ್‌ಆರ್‌ಒ ಆದೇಶದ ಬೆನ್ನಲ್ಲೇ ಗಡಿಪಾರು ಪ್ರಕ್ರಿಯೆ ಆರಂಭವಾಗಲಿದೆ.
