ಸುರತ್ಕಲ್: ಟೋಲ್ ಹಣ ಕೇಳಿದ್ದಕ್ಕೆ ಟೋಲ್ ಸಿಬ್ಬಂದಿಗೆ ಏಳು ಮಂದಿ ಸೇರಿ ಹಿಗ್ಗಾಮುಗ್ಗಾ ಥಳಿತ -Vishwanews24

Featured, ದಕ್ಷಿಣ ಕನ್ನಡ

ಸುರತ್ಕಲ್: ಟೋಲ್ ಹಣ ಕೇಳಿದ್ದಕ್ಕೆ ಟೋಲ್ ಸಿಬ್ಬಂದಿಗೆ ಏಳು ಮಂದಿ ಸೇರಿ ಹಿಗ್ಗಾಮುಗ್ಗಾ ಥಳಿತ –Vishwanews24

ಮಂಗಳೂರು,: ಟೋಲ್‌ ಹಣ ಕೇಳಿದ್ದಕ್ಕೆ ಟೋಲ್‌‌‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಸೋಮವಾರ ಮಂಗಳೂರು ಹೊರವಲಯದ ಸುರತ್ಕಲ್‌‌‌ನಲ್ಲಿರುವ ಟೋಲ್‌ನಲ್ಲಿ ನಡೆದಿದೆ.

ಭಟ್ಕಳ ರಿಜಿಸ್ಟ್ರೇಷನ್ ನಂಬರ್ ನ ಕಾರು ಸುರತ್ಕಲ್ ಟೋಲ್ ನಲ್ಲಿ ಹಣ ಪಾವತಿಸಲು ನಿರಾಕರಿಸಿದ್ದರು ಎಂದು ತಿಳಿದುಬಂದಿದೆ.

ಕಾರಿನಲ್ಲಿದ್ದ ಏಳು ಮಂದಿ ಟೋಲ್‌ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಟೋಲ್‌ ಸಿಬ್ಬಂದಿಯ ಕೈ ಮುರಿತಕ್ಕೊಳಗಾಗಿದ್ದು, ಹಲ್ಲೆ ಮಾಡಿದ ಬಳಿಕ ಕಾರು ಪ್ರಯಾಣಿಕರು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ.

ಹಲ್ಲೆಯ ದೃಶ್ಯ ಟೋಲ್ ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ಬಗ್ಗೆ NHAI ಟೋಲ್ ಸಿಬ್ಬಂದಿಗಳು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದ ಪ್ರಕರಣ ದಾಖಲಾಗಿದೆ.

http://ಸದಾನಂದಗೌಡರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ -Vishwanews24