ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು – Vishwanews24

Featured, ದಕ್ಷಿಣ ಕನ್ನಡ

ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು – Vishwanews24

ಸುಳ್ಯ : ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ.

ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ.

ಪೇಜಾವರ ಶ್ರೀ ಗಳ ವಿರುದ್ಧ ವಿವಾದಾತ್ಮಕ ಹೇಳಿಕೆ : ಕ್ಷಮೆಯಾಚಿಸಿದ ಹಂಸಲೇಖ – VIshwanews24

ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೆರೆಗೆ ತಾವರೆ ಹೂವಿನ ಗಿಡ ಬಿಡಲು ಹೋಗುವುದಾಗಿ ಹೇಳಿಹೋಗಿದ್ದ ಶ್ರೇಯಾ ಹಿಂತಿರುಗಿ ಬರದೇ ಇದ್ದ ಹಿನ್ನೆಲೆಯಲ್ಲಿ ಮನೆಯವರು ಕೆರೆಯ ಕಡೆ ಹೋಗಿದ್ದ ವೇಳೆ ಶ್ರೇಯಾ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ – Vishwanews24