ಸುಳ್ಯ : ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು -vishwanews24
ಸುಳ್ಯ : ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು
ಸುಳ್ಯ : ಕಾರು ಮತ್ತು ಬೈಕ್ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಬಳಿ ನಡೆದಿದೆ.
ಸುಬ್ರಹ್ಮಣ್ಯ ಕಡೆಯಿಂದ ತೆರಳುತ್ತಿದ್ದ ಸೋಮವಾರಪೇಟೆಯ ಬೈಕ್ ಸವಾರ ಮತ್ತು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ತೀವ್ರವಾಗಿ ಗಾಯಗೊಂಡರು.
ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಸುಬ್ರಹ್ಮಣ್ಯದಲ್ಲಿ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಇಲ್ಲದ ಕಾರಣ ಗಾಯಾಳುವನ್ನು ಪುತ್ತೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.
