ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು – vishwanews24
ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು
ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಅನಾರೋಗ್ಯದ ಹಿನ್ನೆಲೆ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.
2018ರ ಡಿಸೆಂಬರ್ 14ರಂದು ಸುಳ್ವಾಡಿ ಕಿಚ್‌ಗುತ್ ಮಾರಮ್ಮ ದೇವಸ್ಥಾನದ ಆಡಳಿತ ಚುಕ್ಕಾಣಿ ಹಿಡಿಯಲು ಹುನ್ನಾರ ನಡೆಸಿ ಪ್ರಸಾದಕ್ಕೆ ವಿಷ ಬೆರೆಸಲಾಗಿತ್ತು. ಪ್ರಸಾದ ಸೇವಿಸಿ 17 ಜನ ಮೃತಪಟ್ಟು, 123ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು.
ಪ್ರಕರಣ ಸಂಬಂಧ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿ ಏಳು ವರ್ಷಗಳಿಂದ ಜೈಲಿನಲ್ಲಿದ್ದ. ಅನಾರೋಗ್ಯದ ಹಿನ್ನೆಲೆ ಮಹದೇವಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದ. ಸದ್ಯ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ರಾಚಯ್ಯ ಒಂದು ವರ್ಷದ ಅವಧಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
