ಸೆಪ್ಟೆಂಬರ್ 30 ರಿಂದ ಶಾಲಾ, ಕಾಲೇಜುಗಳಿಗೆ ದಸರಾ ರಜೆ ನೀಡುವಂತೆ ಸಚಿವರಿಗೆ ಶಾಸಕ ಕಾಮತ್ ಮನವಿ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು:ಬೆಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿಯಾದ ಶಾಸಕ ಕಾಮತ್ ಅವರು, ಹೇಗೆ ಮೈಸೂರು ದಸರಾ ಸುಪ್ರಸಿದ್ಧವಾಗಿದೆಯೋ ಹಾಗೆಯೇ ಮಂಗಳೂರು ದಸರಾ ಕೂಡ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುತ್ತದೆ.

ಮಂಗಳೂರಿನಲ್ಲಿ ನವರಾತ್ರಿಯ ಧಾರ್ಮಿಕ ವಿಧಿವಿಧಾನಗಳು ಸೆಪ್ಟೆಂಬರ್ 28 ರಿಂದಲೇ ಆರಂಭವಾಗುತ್ತದೆ. ದೇವಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ, ಹವನ, ಕಾರ್ಯಕ್ರಮಗಳು ಪ್ರಾರಂಭವಾಗುವುದರಿಂದ ಅದರಲ್ಲಿ ಭಾಗವಹಿಸುವ ಪೋಷಕರಿಗೆ, ಮಕ್ಕಳಿಗೆ, ಶಿಕ್ಷಕರಿಗೆ ರಜೆ ಇದ್ದಲ್ಲಿ ಸಾಕಷ್ಟು ಅನುಕೂಲವಾಗುತ್ತದೆ.ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 6 ರಿಂದ ರಜೆ ನೀಡಿದರೆ ಅದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜು ಮಕ್ಕಳಿಗೆ ತುಂಬಾ ಅನಾನುಕೂಲವಾಗುತ್ತದೆ. ರಾಜ್ಯದ ಬೇರೆಡೆಗೆ ಹೋಲಿಸಿದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿಯ ಆಚರಣೆಗಳು ವಿಶೇಷವಾಗಿದ್ದು ಮಾನ್ಯ ಸಚಿವರು ಈ ಬಗ್ಗೆ ಪರಾಮರ್ಶಿಸಿ ರಜೆಯನ್ನು ಸೆಪ್ಟೆಂಬರ್ 30 ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಸುತ್ತೋಲೆಯನ್ನು ಹೊರಡಿಸಬೇಕು ಎಂದು ಮನವಿ ಮಾಡಿದ್ದಾರೆ.