ಸೆ. ​ 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭ – vishwanews24

Featured, ರಾಜ್ಯ ನ್ಯೂಸ್

ಸೆ. ​ 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭ

ಬೆಂಗಳೂರು : ಸೆಪ್ಟೆಂಬರ್​ 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ ಈ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಕಳೆದ ಬಾರಿ 1 ಕೋಟಿ 5 ಲಕ್ಷ ಸದಸ್ಯತ್ವ ಮಾಡಲಾಗಿತ್ತು. ಇನ್ನು ಸೆಪ್ಟೆಂಬರ್ 25ರ ವರೆಗೂ ಮೊದಲ ಹಂತದಲ್ಲಿ ಹಾಗೂ ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 25 ರವರೆಗೆ ಎರಡನೇ ಹಂತದ ಅಭಿಯಾನ ನಡೆಯಲಿದೆ.

ಬೂತ್, ಜಿಲ್ಲಾ ಮಟ್ಟ ಮತ್ತು ವಿಧಾನಸಭಾ ಕ್ಷೇತ್ರವಾರು ಮಟ್ಟದಲ್ಲಿ ಕೂಡಾ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಮಿಸ್ಡ್ ಕಾಲ್ ಮೂಲಕ ಕೂಡ ಸದಸ್ಯತ್ವ ಅಭಿಯಾನ ನಡೆಯಲಿದೆ ಎಂದು ಹೇಳಿದರು

Leave a Reply