ಸೆ. 5 ಮತ್ತು 6ರಂದು ಕರಾವಳಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ -Vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಸೆ. 5 ಮತ್ತು 6ರಂದು ಕರಾವಳಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ -Vishwanews24

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್‌ 5 ಮತ್ತು 6 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೀದರ್‌, ಕಲಬುರಗಿ ಮತ್ತು ವಿಜಯಪುರ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಿಗೆ ಸೆಪ್ಟೆಂಬರ್‌ 5ರಂದು ಯಲ್ಲೋ ಆಲರ್ಟ್‌ ಘೋಷಣೆ ಮಾಡಲಾಗಿದೆ.

ಸೆಪ್ಟೆಂಬರ್‌ 6ರಂದು ಕರಾವಳಿ ಮತ್ತು ಮಲೆನಾಡಿನ ಎಲ್ಲ ಜಿಲ್ಲೆಗಳಿಗೆ ಹಾಗೂ ಬೀದರ್‌, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಆಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ಹೇಳಿದೆ.