ಸೆ.6ಕ್ಕೆ ಬೆಂಗಳೂರಲ್ಲಿ ಅಹಿಂದ ಸಮಾವೇಶ : ಸಿದ್ದರಾಮಯ್ಯ ಭಾಗಿ – vishwanews24
ಸೆ.6ಕ್ಕೆ ಬೆಂಗಳೂರಲ್ಲಿ ಅಹಿಂದ ಸಮಾವೇಶ : ಸಿದ್ದರಾಮಯ್ಯ ಭಾಗಿ
ಬೆಂಗಳೂರು: ಸೆಪ್ಟೆಂಬರ್ 6ರಂದು ಬೆಂಗಳೂರಲ್ಲಿ ಅಹಿಂದ ಸಮಾವೇಶ ನಡೆಯಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಈ ಸಮಾವೇಶ ಆಯೋಜಿಸಲಾಗಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟ ಬಳಿಕ ನಡೆಯುತ್ತಿರುವ ಸಮಾವೇಶ ಇದಾಗಿದ್ದು, ಕಾಂಗ್ರೆಸ್ನ ಅಹಿಂದ ನಾಯಕರಿಗೂ ಸಮಾವೇಶಕ್ಕೆ ಆಹ್ವಾನ ನೀಡಲಾಗಿದೆ. ಈ ಮಧ್ಯೆ ಕೆಲ ನಾಯಕರಿಗೆ ಸಮಾವೇಶಕ್ಕೆ ಹೋಗ್ಬೇಕಾ..? ಬೇಡ್ವಾ..? ಎಂಬ ಗೊಂದಲ ಕೂಡ ಎದುರಾಗಿದೆ.
ಇದನ್ನೂ ಓದಿ:
ದ.ಕ ಜಿಲ್ಲೆಯಲ್ಲಿ ಆಟೋ ರಿಕ್ಷಾ ದರ ಪರಿಷ್ಕರಣೆ : ಕನಿಷ್ಟ 40 ರೂ .ದರ ಏರಿಕೆ – vishwanews24
ಇನ್ನು ಸಮಾವೇಶದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಾತಿಗಣತಿ, ಒಳಮೀಸಲಾತಿ ವಿಚಾರಗಳ ಬಗ್ಗೆಯೂ ಅಹಿಂದ ಸಮಾವೇಶದಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ಸೆಪ್ಟೆಂಬರ್ 6 ನಡೆಯಲಿರುವ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಸಂದೇಶವೇನು? ಏಕಕಾಲಕ್ಕೆ ಪಕ್ಷ ಮತ್ತು ಸರ್ಕಾರ ಅಚ್ಚರಿಯಾಗುವ ರೀತಿಯಲ್ಲಿ ನಿರ್ಧಾರವನ್ನೇನಾದರೂ ತೆಗೆದುಕೊಳ್ಳಲಿದ್ದಾರಾ? ಎಂಬ ಕುತೂಹಲ ಮೂಡಿದೆ. ಅಷ್ಟೇ ಅಲ್ಲ ಈ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಸೇರಿದಂತೆ ಕಾಂಗ್ರೆಸ್ನ ಪ್ರಮುಖ ನಾಯಕರು ಸಮಾವೇಶಕ್ಕೆ ಹಾಜರಾಗುತ್ತಾರಾ ಎಂಬುದರ ಮೇಲೂ ಎಲ್ಲರ ಕಣ್ಣು ನೆಟ್ಟಿದೆ.
ಇದನ್ನೂ ಓದಿ:
ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.4, 7 ಎರಡು ದಿನ ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ರದ್ದು – vishwanews24
