ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

Featured, ರಾಜ್ಯ ನ್ಯೂಸ್

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್‌ 7ರೊಳಗೆ ಸಿದ್ಧಪಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಜನಪ್ರತಿನಿಧಿಗಳೊಂದಿಗೆ ಅವರು ಸಭೆ ನಡೆಸಿದರು. ಈ ವೇಳೆ, ಪ್ರಸ್ತಾವಿತ ನೀತಿಯಲ್ಲಿ ಅಳವಡಿಸಬೇಕಾದ ಪ್ರಮುಖ ಅಂಶಗಳು, ಪ್ರವಾಸೋದ್ಯಮ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ಪ್ರಸ್ತುತ ಎದುರಾಗುತ್ತಿರುವ ನಿಯಂತ್ರಣಾತ್ಮಕ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.

ಕರಾವಳಿ ಮತ್ತು ಮಲೆನಾಡು ಪ್ರದೇಶಗಳು ಕಡಲತೀರ, ಧಾರ್ಮಿಕ ಹಾಗೂ ಸಾಂಸ್ಕೃತಿಕ ತಾಣಗಳು, ಪ್ರಕೃತಿ ಪ್ರವಾಸೋದ್ಯಮ ಸೇರಿದಂತೆ ವೈವಿಧ್ಯಮಯ ಪ್ರವಾಸೋದ್ಯಮ ಸಂಪನ್ಮೂಲಗಳನ್ನು ಹೊಂದಿವೆ. ಈ ಸಾಮರ್ಥ್ಯವನ್ನು ಬಳಸಿಕೊಂಡು ಸ್ಥಳೀಯ ಆರ್ಥಿಕತೆ, ಹೂಡಿಕೆ ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ನೀತಿ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

Leave a Reply